ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ (Court) ವಿಚಾರಣೆಯಲ್ಲಿರುವ ಸುಮಾರು 30 ಕ್ಕೂ ಹೆಚ್ಚು ಅಪರಾಧ (Crime) ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಉಪಸಮಿತಿ ನಿರ್ಧಾರ ಮಾಡಿದೆ. ವಿಚಾರಣೆಯಲ್ಲಿರುವ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಪರಿಶೀಲಿಸಿ ಸಚಿವ ಸಂಪುಟಕ್ಕೆ ಸೂಕ್ತ ಶಿಫಾರಸು ಮಾಡುವ ಕುರಿತು ಇಂದು (ಆಗಸ್ಟ 2) ವಿಧಾನಸೌಧದಲ್ಲಿ ಕಾನೂನು ಸಚಿವ ಮಾಧುಸ್ವಾಮಿ (JC Madhu Swamy) ನೇತೃತ್ವದಲ್ಲಿ ನಡೆದಿದ್ದ ಉಪಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್ -ಎ ವೃಂದದ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆಗೆ ಸಂಬಂಧಿಸಿದಂತೆ ಲೋಕಾಯುಕ್ತರ ಶಿಫಾರಸು ಕುರಿತು ಪರಾಮರ್ಶಿಸಲು ಸಚಿವ ಜೆ.ಸಿ. ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಉಪಸಮಿತಿ ಸಭೆ ನಡೆದಿದೆ.
ಸಭೆಯಲ್ಲಿ ಜೆ.ಸಿ. ಮಾಧುಸ್ವಾಮಿ ಆಕ್ರೋಶಗೊಂಡಿದ್ದು, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಜೆ.ಸಿ. ಮಾಧುಸ್ವಾಮಿ ವಿಕಾಸಸೌಧ ಕಟ್ಟಡ ಕಾಮಗಾರಿಗೆ ಸಂಬಂಧಿಸಿದಂತೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಸುಮಾರು ಮುಕ್ಕಾಲು ಗಂಟೆ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಸಚಿವ ಮಾಧುಸ್ವಾಮಿ ಕಾಮಗಾರಿ ಸಂಬಂಧ ಅಧಿಕಾರಿಗಳನ್ನು ದೋಷಮುಕ್ತಗೊಳಿಸುವುದಕ್ಕೆ ಒಪ್ಪಲಿಲ್ಲ. ಲೋಕಾಯುಕ್ತ ತನಿಖೆ ಮುಂದುವರಿಯಲಿ ಎಂದು ಸಚಿವ ಮಾಧುಸ್ವಾಮಿ ಸೂಚನೆ ನೀಡಿದ್ದಾರೆ.