ರಮ್ಯಾ ಕನ್ನಡಿಗರೆಲ್ಲರಿಗೂ ಚಿರಪರಿಚಿತವಾದ ಹೆಸರು. ದಶಕದ ಹಿಂದೆಯೇ ಬೆಳ್ಳಿತೆರೆಗೆ ಕಾಲಿಟ್ಟು ಕನ್ನಡ ಮಾತ್ರವಲ್ಲದೆ, ದಕ್ಷಿಣದ ವಿವಿಧ ಭಾಷೆಗಳಲ್ಲಿ ಪ್ರಸಿದ್ದಿ ಪಡೆದ ನಟಿ ಈಕೆ. ಅಸಂಖ್ಯ ಕನ್ನಡಿಗರ ಮನಸ್ಸಿನ ರಾಣಿಯಗಿದ್ದ ರಮ್ಯಾ ಅವರು, ಕೊನೆಯ ಬಾರಿ ಬಣ್ಣ ಹಚ್ಚಿದ್ದು 2016ರಲ್ಲಿ ಬಿಡುಗಡೆಯಾದ ‘ನಾಗರಹಾವು’ ಸಿನಿಮಾಗಾಗಿ. ಇದಾದ ಮೇಲೆ ಚಿತ್ರರಂಗದಿಂದ ದೂರ ಉಳಿದಿದ್ದರು ರಮ್ಯಾ. ಇದೀಗ ಹೊಸ ಸುದ್ದಿಯ ಮೂಲಕ ಅಭಿಮಾನಿಗಳಿಗೆ ಆನಂದ ತಂದಿದ್ದಾರೆ. ರಮ್ಯಾ ಮರಳಿ ಚಿತ್ರರಂಗದ ಕಡೆಗೆ ಮುಖ ಮಾಡುತ್ತಿದ್ದಾರೆ, ಹೊಸ ಸಿನಿಮಾವೊಂದನ್ನು ಘೋಷಣೆ ಮಾಡಿದ್ದಾರೆ.

ಸುಮಾರು ಆರು ವರ್ಷಗಳ ಬಳಿಕ ರಮ್ಯಾ ಚಿತ್ರರಂಗಕ್ಕೆ ಮರಳಿ ಕಾಲಿಡುತ್ತಿದ್ದಾರೆ. ಹಾಗಾಗಿ ಈ ವಿಚಾರ ಎಲ್ಲೆಡೆ ಮಿಂಚಿನಂತೆ ಸಂಚರಿಸುತ್ತಿದೆ. ಅಂದ ಹಾಗೇ ರಮ್ಯಾ ಅವರ ಮುಂದಿನ ಚಿತ್ರ ಬರುತ್ತಿರುವುದು, ಸದ್ಯ ಕನ್ನಡ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸುತ್ತಿರುವ ರಾಜ್ ಬಿ ಶೆಟ್ಟಿಯವರ ಜೊತೆ.

‘ಗರುಡ ಗಮನ ವೃಷಭ ವಾಹನ’ ಚಿತ್ರದ ಮೂಲಕ ಕನ್ನಡಿಗರ ನೆಚ್ಚಿನ ನಟ-ನಿರ್ದೇಶಕರಲ್ಲಿ ಒಬ್ಬರಾಗಿರುವ ರಾಜ್ ಅವರೇ ಈ ಹೊಸ ಸಿನಿಮಾವನ್ನು ನಿರ್ದೇಶಿಸಿ, ನಾಯಕರಾಗಿ ನಟಿಸುತ್ತಿದ್ದಾರೆ. ಆಯುಧ ಪೂಜೆಯ ಸಲುವಾಗಿ ಚಿತ್ರದ ಶೀರ್ಷಿಕೆಯನ್ನು ಚಿತ್ರತಂಡ ಹೊರಹಾಕಿದ್ದು, ‘ಸ್ವಾತಿ ಮುತ್ತಿನ ಮಳೆಹನಿಯೇ’ ಎಂಬ ಸುಮಧುರ ಶೀರ್ಷಿಕೆಯನ್ನು ಚಿತ್ರಕ್ಕೆ ಇಡಲಾಗಿದೆ..

ಈ ಹೊಸ ಚಿತ್ರವನ್ನು ರಮ್ಯಾ ಅವರ ‘ಆಪಲ್ ಬಾಕ್ಸ್ ಸ್ಟುಡಿಯೋಸ್’ ಹಾಗೂ ರಾಜ್ ಬಿ ಶೆಟ್ಟಿಯವರ ‘ಲೈಟರ್ ಬುದ್ಧ ಫಿಲಂಸ್’ ಸೇರಿ ನಿರ್ಮಾಣ ಮಾಡುತ್ತಿದ್ದು, ‘ಗರುಡ ಗಮನ ವೃಷಭ ವಾಹನ’ ಚಿತ್ರದ ಖ್ಯಾತಿಯ ಮಿಧುನ್ ಮುಕುಂದನ್ ಅವರು ಸಂಗೀತ ತುಂಬಲಿದ್ದಾರೆ. ಆದಷ್ಟು ಬೇಗ ಚಿತ್ರೀಕರಣ ಆರಂಭವಾಗುವ ಸಾಧ್ಯತೆಯಿದೆ.
ಜಾಹೀರಾತು ಮತ್ತು ಸುದ್ದಿ ಕಳುಹಿಸಲು ಸಂಪರ್ಕಿಸಿ
9740160669
ಭಾರತ ಸಾರಥಿ ಕನ್ನಡ ದಿನಪತ್ರಿಕೆ ಸದಾ ನಿಮ್ಮೊಂದಿಗೆ