ಚಿರಂಜೀವಿ ಸರ್ಜಾ ಅಗಲಿಕೆಯ ಬಳಿಕ ಸ್ವಲ್ಪ ವಿರಾಮ ತೆಗೆದುಕೊಂಡಂತಿದ್ದ ಮೇಘನಾ ರಾಜ್ ಇದೀಗ ಮತ್ತೆ ತಮ್ಮನ್ನು ಸಿನಿಮಾ, ಕಿರುತೆರೆ ಅಂತ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದಾರೆ. ಈಗ ವಿಷಯ ಏನಪ್ಪಾ ಅಂದ್ರೆ ಈ ಮಧ್ಯೆ ಮೇಘನಾ ರಾಜ್ ಅವರು ಮರು ಮದುವೆ ಆಗುತ್ತಿದ್ದಾರೆ ಎನ್ನುವ ಬಗ್ಗೆ ಸುದ್ದಿ ಹಬ್ಬಿತ್ತು.
ಕೆಲವು ದಿನಗಳ ಹಿಂದಷ್ಟೇ ಮೇಘನಾ ರಾಜ್ ನೀಡಿದ್ದಾರೆ ಎನ್ನಲಾದ ಸಂದರ್ಶನವೊಂದು ವೈರಲ್ ಆಗಿ ಇದರಲ್ಲಿ ಮೇಘನಾ ರಾಜ್ ಎರಡನೇ ಮದುವೆ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿತ್ತು. ಈ ಸಂದರ್ಶನ ವೈರಲ್ ಆಗುತ್ತಿದ್ದಂತೆ ಮೇಘನಾ ರಾಜ್ ಎರಡನೇ ಮದುವೆ ಬಗ್ಗೆ ಎದ್ದಿರುವ ಸುದ್ದಿಯ ಬಗ್ಗೆ ಸಾಕಷ್ಟು ಚರ್ಚೆಗಳಾಗಿ, ಮೇಘನಾ ರಾಜ್ ಇದಕ್ಕೆ ಪ್ರತಿಕ್ರಿಯೆ ನೀಡಿದ್ದರೂ, ಸೋಶಿಯಲ್ ಮೀಡಿಯಾದಲ್ಲಿ ಮಾತ್ರ ಚರ್ಚೆ ನಿಂತಿರಲಿಲ್ಲ.

ಇದೀಗ ಮೇಘನಾ ರಾಜ್ ಹಾಕಿರುವ ಒಂದು ಫೋಟೊ ಅದೆಲ್ಲದಕ್ಕೂ ಉತ್ತರ ಕೊಟ್ಟಿದೆ. ಸದ್ಯ ಸೋಶಿಯಲ್ ಮೀಡಿಯಾಗಳಲ್ಲಿ ಈ ಫೋಟೊ ವೈರಲ್ ಆಗಿದೆ.
ಮೇಘನಾ ರಾಜ್ ಬಾಲಿವುಡ್ ನ ಬಬಲ್ ಎನ್ನುವ ವೆಬ್ ಸೈಟ್‌ಗೆ ಸಂದರ್ಶನ ನೀಡಿದ್ದು, ಅದರಲ್ಲಿ ‘ನನ್ನ ಸುತ್ತ ಇರುವ ಅದೆಷ್ಟೋ ಜನರು ಮತ್ತೆ ಮದುವೆಯಾಗಲು ಹೇಳುತ್ತಿದ್ದಾರೆ. ಮತ್ತೆ ಕೆಲವರು ಒಂಟಿಯಾಗಿದ್ದುಕೊಂಡು ಮಗ ರಾಯನನ್ನು ನೋಡಿಕೊಳ್ಳುವಂತೆ ಸಲಹೆ ನೀಡುತ್ತಿದ್ದಾರೆ. ಎರಡನ್ನೂ ಹೇಳುವ ಜನರೂ ಇದ್ದಾರೆ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು.

ಈ ಬಗ್ಗೆ ವದಂತಿಗಳು ಹರಿದಾಡುತ್ತಿರುವ ಸಮಯದಲ್ಲೇ ಮೇಘನಾ ರಾಜ್ ಪತಿ ಚಿರಂಜೀವಿ ಸರ್ಜಾ ಹಾಗೂ ಮಗ ರಾಯನ್ರಾಜ್ ಸರ್ಜಾ ಅವರ ಹೆಸರುಗಳನ್ನು ಹಚ್ಚೆ ಹಾಕಿಸಿಕೊಂಡಿದ್ದಾರೆ. ತಮ್ಮ ಬದುಕಿನಲ್ಲಿ ಇವರಿಬ್ಬರು ತುಂಬಾ ಮುಖ್ಯ ವ್ಯಕ್ತಿಗಳು ಎಂಬುದನ್ನು ಈ ಮೂಲಕ ಸಾರಿ ಹೇಳಿದ್ದಾರೆ. ಕೈಯಲ್ಲಿ ಚಿರಂಜೀವಿ ಸರ್ಜಾ ಹಾಗೂ ರಾಯನ್ ಟ್ಯಾಟು ವಿಶೇಷವಾಗಿದ್ದು, ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.

ಅಂದ ಹಾಗೇ ಮೇಘನಾ ರಾಜ್ ಬಾಲಿವುಡ್ ವೆಬ್‌ಸೈಟ್‌ಗೆ ನೀಡಿದ ಸಂದರ್ಶನದಲ್ಲಿ ಎರಡನೇ ಮದುವೆ ಬಗ್ಗೆ ಯೋಚಿಸಿಲ್ಲ ಎಂದು ಹೇಳಿದ್ದಾಗಿ ವರದಿಯಾಗಿದೆ. ‘ನಾಳೆ ಹೇಗಿರುತ್ತೆ ಎಂದು ನಾನು ಯೋಚಿಸುವುದಿಲ್ಲ. ಮುಂದಿನ ಜೀವನ ಹೇಗಿರುತ್ತೆ ಎಂದೂ ತಲೆಕೆಡಿಸಿಕೊಳ್ಳುವುದಿಲ್ಲ. ಹಾಗಾಗಿ ಈ ವಿಚಾರದ ಬಗ್ಗೆ ಇನ್ನೂ ಯೋಚಿಸಿಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿತ್ತು.ಮೇಘನಾ ರಾಜ್ ಈ ಟ್ಯಾಟುಗಳ ಮೂಲಕ ಎರಡನೇ ಮದುವೆ ಬಗ್ಗೆ ಸ್ಪಷ್ಟನೆ ನೀಡಿದಂತಿದೆ.
ಮೇಘನಾ ರಾಜ್ ಸದ್ಯ ಅಮೆರಿಕಾದಲ್ಲಿದ್ದಾರೆ. ಅಲ್ಲಿನ ಕ್ಯಾಲಿಪೋರ್ನಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೇಘನಾ ರಾಜ್ ಭಾಗಿಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಫೋಟೊಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅಲ್ಲದೆ ಸಿನಿಮಾ ಹಾಗೂ ರಿಯಾಲಿಟಿ ಶೋ ಅಂತ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ ನಟಿ.
ಜಾಹೀರಾತು ಮತ್ತು ಸುದ್ದಿ ಕಳುಹಿಸಲು ಸಂಪರ್ಕಿಸಿ
9740160669
ಭಾರತ ಸಾರಥಿ ಕನ್ನಡ ದಿನಪತ್ರಿಕೆ ಸದಾ ನಿಮ್ಮೊಂದಿಗೆ