ಹುಬ್ಬಳ್ಳಿಯ (Hubli) ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ (Rahul Gandhi) ಗಾಂಧಿ ಅವರ ನೇತೃತ್ವದಲ್ಲಿ ಕೆಪಿಸಿಸಿ (KPCC) ರಾಜಕೀಯ ವ್ಯವಹಾರಗಳ ಸಮಿತಿ ಸಭೆ ನಡೆದಿದ್ದು, ಸಭೆಯಲ್ಲಿ ಚುನಾವಣೆ ಹೊಸ್ತಿಲಲ್ಲೇ ಆಡಳಿತಾರೂಢ ಸರ್ಕಾರದ ವೈಫಲ್ಯ ಎತ್ತಿಹಿಡಿಯಿರಿ ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚಿಸಿದ್ದಾರೆ. ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸುವ ಚಿಂತನೆ ಮಾಡಿ. ವ್ಯಕ್ತಿ ಪೂಜೆ ಬಿಟ್ಟು 150ಕ್ಕೂ ಹೆಚ್ಚು ಸೀಟ್ ಗೆಲ್ಲುವತ್ತ ಲಕ್ಷ ನೀಡಿ ಎಂದು ಸೂಚಿಸಿದ್ದಾರೆ.
ಬೆಲೆ ಏರಿಕೆ, ಜಿ.ಎಸ್.ಟಿ, ಜನ ವಿರೋಧಿ ನೀತಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ. ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳನ್ನು ಶಮನಗೊಳಿಸುವಂತೆ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಸೇರಿದಂತೆ ಸಮಿತಿಯ 23 ಸದಸ್ಯರು ಭಾಗಿಯಾಗಿದ್ದರು.