ಸಿನಿಮಾ ಕ್ಷೇತ್ರದಲ್ಲಿ ಬ್ಯುಸಿಯಾಗಿರುವ ನಟ ನಟಿಯರು ಇಂದು ಸಾಮಾನ್ಯ ಜನರಿಗೂ ತುಂಬಾ ಹತ್ತಿರವಾಗಿದ್ದಾರೆ ಎಂದರೆ ಸಾಮಾಜಿಕ ಜಾಲತಾಣವೇ ಮುಖ್ಯ ಕಾರಣ ಎನ್ನುವುದು ಅಕ್ಷರಶಃ ನಿಜ. ನಟನೆಯ ಹೊರತಾಗಿ ಸೋಶಿಯಲ್ ಮೀಡಿಯಾದಲ್ಲಿಯೂ ಕೊಂಚ ಮಟ್ಟಿಗೆ ಆ್ಯಕ್ಟೀವ್ ಆಗಿರುವ ತಾರೆಯರು ತಮ್ಮ ವೃತ್ತಿ ಜೀವನದ ಜೊತೆಗೆ ವೈಯಕ್ತಿಕ ವಿಚಾರಗಳನ್ನು ಕೂಡಾ ಶೇರ್ ಮಾಡುತ್ತಿರುತ್ತಾರೆ. ಇನ್ನು ಕೆಲವರು ತಮ್ಮ ಬಿಡುವಿನ ವೇಳೆಯಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬರುವುದಲ್ಲದೇ ಅಭಿಮಾನಿಗಳ, ಆಪ್ತರ ಪ್ರಶ್ನೆಗಳಿಗೆ ಉತ್ತರವನ್ನು ಕೂಡಾ ನೀಡುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವಂತಹ ಕನ್ನಡ ಕಿರುತೆರೆ ನಟಿಯರು ಯಾರು ಯಾರು ಎಂದು ನೋಡೋಣ.

ಅನುಶ್ರೀ- ಅರಳು ಹುರಿದಂತೆ ಪಟಪಟನೆ ಮಾತಾನಾಡುತ್ತಾ, ಕಿರುತೆರೆ ವೀಕ್ಷಕರಿಗೆ ಕೇವಲ ತಮ್ಮ ಮಾತಿನ ಮೂಲಕ ಮನರಂಜನೆಯ ರಸದೌತಣವನ್ನೇ ಉಣಬಡಿಸುತ್ತಿರುವ ಅನುಶ್ರೀ ಅತೀ ಹೆಚ್ಚು ಫಾಲೋವರ್ಸ್ ಹೊಂದಿದ ಟಿವಿ ಸೆಲೆಬ್ರಿಟಿಗಳಲ್ಲಿ ಮೊದಲನೆ ಸ್ಥಾನ ಪಡೆದಿದ್ದಾರೆ. ಹೌದು, ಬರೋಬ್ಬರಿ 1.9 ಮಿಲಿಯನ್ ಫಾಲೋವರ್ಸ್ ಹೊಂದಿರುವ ಅನುಶ್ರೀ ನಿರೂಪಕಿಯಾಗಿ ಬ್ಯುಸಿಯಾಗಿದ್ದಾರೆ.

ನಿವೇದಿತಾ ಗೌಡ – ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಕಿರುತೆರೆಗೆ ಕಾಲಿಟ್ಟ ನಿವೇದಿತಾ ಗೌಡ ಸದ್ಯ ಕಲರ್ಸ್ ಕನ್ನಡ ವಾಹಿನಿಯ ಗಿಚ್ಚಿ ಗಿಲಿಗಿಲಿ ಶೋವಿನಲ್ಲಿ ಸ್ಪರ್ಧಿಯಾಗಿ ಸದ್ದು ಮಾಡುತ್ತಿದ್ದಾರೆ. ಸದಾ ಕಾಲ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಈಕೆಯ ಫಾಲೋವರ್ಸ್ ಗಳ ಸಂಖ್ಯೆ 1.5 ಮಿಲಿಯನ್.

ದೀಪಿಕಾ ದಾಸ್- ನಾಗಿಣಿ ಧಾರಾವಾಹಿಯಲ್ಲಿ ಇಚ್ಛಾಧಾರಿಣಿ ನಾಗಿಣಿಯಾಗಿ ಕಿರುತೆರೆಯಲ್ಲಿ ಹೊಸ ಹವಾ ಸೃಷ್ಟಿ ಮಾಡಿರುವ ಚೆಂದುಳ್ಳಿ ಚೆಲುವೆ ದೀಪಿಕಾ ದಾಸ್ ಕೂಡಾ ಇನ್ಸ್ಟಾಗ್ರಾಮ್ ನಲ್ಲಿ 1. 3 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.

ವೈಷ್ಣವಿ- ದೇವಿ ಧಾರಾವಾಹಿಯ ಮೂಲಕ ಕಿರುತೆರೆಗೆ ಕಾಲಿಟ್ಟ ವೈಷ್ಣವಿ ಗೌಡಗೆ ಹೆಸರು ತಂದು ಕೊಟ್ಟಿದ್ದು ಅಗ್ನಿಸಾಕ್ಷಿ ಧಾರಾವಾಹಿ. ಅಗ್ನಿಸಾಕ್ಷಿಯ ಸನ್ನಿಧಿಯಾಗಿ ಎಂಟು ವರ್ಷಗಳ ಕಾಲ ಕಿರುತೆರೆಯಲ್ಲಿ ಮಿಂಚಿರುವ ವೈಷ್ಣವಿ ಗೌಡ ಅವರು 1.1 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.

ಮೇಘಾ ಶೆಟ್ಟಿ – ಮೊದಲ ಧಾರಾವಾಹಿಯಲ್ಲಿಯೇ ನಾಯಕಿಯಾಗಿ ನಟಿಸುವ ಸುವರ್ಣಾವಕಾಶ ಪಡೆದುಕೊಂಡ ನಟಿಯರ ಪೈಕಿ ಮೇಘಾ ಶೆಟ್ಟಿ ಕೂಡಾ ಒಬ್ಬರು. ಜೊತೆಜೊತೆಯಲಿ ಧಾರಾವಾಹಿಯ ಅನು ಸಿರಿಮನೆಯಾಗಿ ಕಿರುತೆರೆಯಲ್ಲಿ ಕಮಾಲ್ ಮಾಡುತ್ತಿರುವ ಮೇಘಾ ಶೆಟ್ಟಿ ಅವರು ಇತ್ತೀಚೆಗಷ್ಟೇ 1 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ಕಡಿಮೆ ಅವಧಿಯಲ್ಲಿ
ಕಿರುತೆರೆ ವೀಕ್ಷಕರ ಮನ ಸೆಳೆದಿರುವ ಮೇಘಾ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲೂ ಸದ್ದು ಮಾಡುತ್ತಿದ್ದಾರೆ.
ಜಾಹೀರಾತು ಮತ್ತು ಸುದ್ದಿ ಕಳುಹಿಸಲು ಸಂಪರ್ಕಿಸಿ
9740160669
ಭಾರತ ಸಾರಥಿ ಕನ್ನಡ ದಿನಪತ್ರಿಕೆ ಸದಾ ನಿಮ್ಮೊಂದಿಗೆ